61 : 1
سَبَّحَ لِلَّهِ مَا فِى ٱلسَّمَـٰوَٰتِ وَمَا فِى ٱلْأَرْضِ ۖ وَهُوَ ٱلْعَزِيزُ ٱلْحَكِيمُ
ಭೂಮ್ಯಾಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನ ಪರಿಶುದ್ಧಿಯನ್ನು ಕೊಂಡಾಡುತ್ತಿವೆ. ಅವನು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.
★
61 : 2
يَـٰٓأَيُّهَا ٱلَّذِينَ ءَامَنُوا۟ لِمَ تَقُولُونَ مَا لَا تَفْعَلُونَ
ಓ ಸತ್ಯವಿಶ್ವಾಸಿಗಳೇ! ನೀವು ಮಾಡದ ಕಾರ್ಯವನ್ನು ನೀವೇಕೆ ಹೇಳುತ್ತೀರಿ?
★
61 : 3
كَبُرَ مَقْتًا عِندَ ٱللَّهِ أَن تَقُولُوا۟ مَا لَا تَفْعَلُونَ
ನೀವು ಮಾಡದ ಕಾರ್ಯವನ್ನು ನೀವು ಹೇಳುವುದು ಅಲ್ಲಾಹು ಅತ್ಯಧಿಕ ದ್ವೇಷಿಸುವ ವಿಷಯವಾಗಿದೆ.
★
61 : 4
إِنَّ ٱللَّهَ يُحِبُّ ٱلَّذِينَ يُقَـٰتِلُونَ فِى سَبِيلِهِۦ صَفًّا كَأَنَّهُم بُنْيَـٰنٌ مَّرْصُوصٌ
ಅಲ್ಲಾಹನ ಮಾರ್ಗದಲ್ಲಿ ಸಾಲು ಸಾಲಾಗಿ ನಿಂತು ಯುದ್ಧ ಮಾಡುವವರನ್ನು ಅಲ್ಲಾಹು ಪ್ರೀತಿಸುತ್ತಾನೆ. ಅವರು ಸೀಸವನ್ನು ಎರಕ ಹೊಯ್ದು ಕಟ್ಟಿದ ಕಟ್ಟಡವೇನೋ ಎಂಬಂತೆ.
★
61 : 5
وَإِذْ قَالَ مُوسَىٰ لِقَوْمِهِۦ يَـٰقَوْمِ لِمَ تُؤْذُونَنِى وَقَد تَّعْلَمُونَ أَنِّى رَسُولُ ٱللَّهِ إِلَيْكُمْ ۖ فَلَمَّا زَاغُوٓا۟ أَزَاغَ ٱللَّهُ قُلُوبَهُمْ ۚ وَٱللَّهُ لَا يَهْدِى ٱلْقَوْمَ ٱلْفَـٰسِقِينَ
ಮೂಸಾ ತಮ್ಮ ಜನರೊಡನೆ ಹೇಳಿದ ಸಂದರ್ಭ: “ನನ್ನ ಜನರೇ! ನೀವೇಕೆ ನನಗೆ ತೊಂದರೆ ಕೊಡುತ್ತೀರಿ? ನಾನು ನಿಮ್ಮ ಬಳಿಗೆ ಬಂದ ಅಲ್ಲಾಹನ ಸಂದೇಶವಾಹಕನೆಂದು ನಿಮಗೆ ಬಹಳ ಚೆನ್ನಾಗಿ ತಿಳಿದಿದೆ.” ನಂತರ ಅವರು (ಜನರು) ಸತ್ಯದಿಂದ ವಿಚಲಿಸಿದಾಗ ಅಲ್ಲಾಹು ಅವರ ಹೃದಯಗಳನ್ನು ವಕ್ರಗೊಳಿಸಿದನು. ದುಷ್ಕರ್ಮಿಗಳಾದ ಜನರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ.
★
61 : 6
وَإِذْ قَالَ عِيسَى ٱبْنُ مَرْيَمَ يَـٰبَنِىٓ إِسْرَٰٓءِيلَ إِنِّى رَسُولُ ٱللَّهِ إِلَيْكُم مُّصَدِّقًا لِّمَا بَيْنَ يَدَىَّ مِنَ ٱلتَّوْرَىٰةِ وَمُبَشِّرًۢا بِرَسُولٍ يَأْتِى مِنۢ بَعْدِى ٱسْمُهُۥٓ أَحْمَدُ ۖ فَلَمَّا جَآءَهُم بِٱلْبَيِّنَـٰتِ قَالُوا۟ هَـٰذَا سِحْرٌ مُّبِينٌ
ಮರ್ಯಮರ ಮಗ ಈಸಾ ಹೇಳಿದ ಸಂದರ್ಭ: “ಓ ಇಸ್ರಾಯೇಲ್ ಮಕ್ಕಳೇ! ನಾನು ನನಗಿಂತ ಮೊದಲು ಅವತೀರ್ಣವಾದ ತೌರಾತನ್ನು ದೃಢೀಕರಿಸಲು ಮತ್ತು ನನ್ನ ನಂತರ ಬರುವ ಅಹ್ಮದ್[1] ಎಂಬ ಹೆಸರಿನ ಒಬ್ಬ ಸಂದೇಶವಾಹಕರ ಬಗ್ಗೆ ನಿಮಗೆ ಸುವಾರ್ತೆ ತಿಳಿಸಲು ನಿಮ್ಮ ಬಳಿಗೆ ಕಳುಹಿಸಲಾಗಿರುವ ಅಲ್ಲಾಹನ ಸಂದೇಶವಾಹಕನಾಗಿದ್ದೇನೆ.” ಆದರೆ ಅವರು (ಈಸಾ) ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಅವರ ಬಳಿಗೆ ಬಂದಾಗ ಅವರು ಹೇಳಿದರು: “ಇದು ಸ್ಪಷ್ಟ ಮಾಟಗಾರಿಕೆಯಾಗಿದೆ.”
★
61 : 7
وَمَنْ أَظْلَمُ مِمَّنِ ٱفْتَرَىٰ عَلَى ٱللَّهِ ٱلْكَذِبَ وَهُوَ يُدْعَىٰٓ إِلَى ٱلْإِسْلَـٰمِ ۚ وَٱللَّهُ لَا يَهْدِى ٱلْقَوْمَ ٱلظَّـٰلِمِينَ
ಅಲ್ಲಾಹನ ಮೇಲೆ ಸುಳ್ಳಾರೋಪಿಸುವವನಿಗಿಂತಲೂ ದೊಡ್ಡ ಅಕ್ರಮಿ ಯಾರು? ವಾಸ್ತವವಾಗಿ ಅವನನ್ನು ಇಸ್ಲಾಂ ಧರ್ಮಕ್ಕೆ ಆಮಂತ್ರಿಸಲಾಗುತ್ತಿದೆ. ಅಕ್ರಮಿಗಳಾದ ಜನರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ.
★
61 : 8
يُرِيدُونَ لِيُطْفِـُٔوا۟ نُورَ ٱللَّهِ بِأَفْوَٰهِهِمْ وَٱللَّهُ مُتِمُّ نُورِهِۦ وَلَوْ كَرِهَ ٱلْكَـٰفِرُونَ
ಅವರು ತಮ್ಮ ಬಾಯಿಯ ಮೂಲಕ ಅಲ್ಲಾಹನ ಬೆಳಕನ್ನು ನಂದಿಸಲು ಬಯಸುತ್ತಾರೆ. ಆದರೆ ಅಲ್ಲಾಹು ತನ್ನ ಬೆಳಕನ್ನು ಪೂರ್ಣಗೊಳಿಸಿ ಬಿಡುವನು. ಸತ್ಯನಿಷೇಧಿಗಳು ಎಷ್ಟು ದ್ವೇಷಿಸಿದರೂ ಸಹ.
★
61 : 9
هُوَ ٱلَّذِىٓ أَرْسَلَ رَسُولَهُۥ بِٱلْهُدَىٰ وَدِينِ ٱلْحَقِّ لِيُظْهِرَهُۥ عَلَى ٱلدِّينِ كُلِّهِۦ وَلَوْ كَرِهَ ٱلْمُشْرِكُونَ
ಅವನೇ ಸನ್ಮಾರ್ಗ ಮತ್ತು ಸತ್ಯಧರ್ಮದೊಂದಿಗೆ ತನ್ನ ಸಂದೇಶವಾಹಕರನ್ನು ಕಳುಹಿಸಿದವನು. ಈ ಧರ್ಮವು ಇತರೆಲ್ಲಾ ಧರ್ಮಗಳ ಮೇಲೆ ಜಯಗಳಿಸುವಂತೆ ಮಾಡುವುದಕ್ಕಾಗಿ. ಬಹುದೇವಾರಾಧಕರು ಎಷ್ಟು ದ್ವೇಷಿಸಿದರೂ ಸಹ.
★
61 : 10
يَـٰٓأَيُّهَا ٱلَّذِينَ ءَامَنُوا۟ هَلْ أَدُلُّكُمْ عَلَىٰ تِجَـٰرَةٍ تُنجِيكُم مِّنْ عَذَابٍ أَلِيمٍ
ಓ ಸತ್ಯವಿಶ್ವಾಸಿಗಳೇ! ಯಾತನಾಮಯ ಶಿಕ್ಷೆಯಿಂದ ನಿಮ್ಮನ್ನು ಪಾರು ಮಾಡುವ ಒಂದು ವ್ಯಾಪಾರದ ಬಗ್ಗೆ ನಾನು ನಿಮಗೆ ತಿಳಿಸಿಕೊಡಲೇ?
★
61 : 11
تُؤْمِنُونَ بِٱللَّهِ وَرَسُولِهِۦ وَتُجَـٰهِدُونَ فِى سَبِيلِ ٱللَّهِ بِأَمْوَٰلِكُمْ وَأَنفُسِكُمْ ۚ ذَٰلِكُمْ خَيْرٌ لَّكُمْ إِن كُنتُمْ تَعْلَمُونَ
ನೀವು ಅಲ್ಲಾಹನಲ್ಲಿ ಮತ್ತು ಅವನ ಸಂದೇಶವಾಹಕರಲ್ಲಿ ವಿಶ್ವಾಸವಿಡಿರಿ. ನಿಮ್ಮ ತನು-ಧನಗಳಿಂದ ಅಲ್ಲಾಹನ ಮಾರ್ಗದಲ್ಲಿ ಹೋರಾಡಿರಿ. ನೀವು ತಿಳಿದವರಾಗಿದ್ದರೆ ಅದೇ ನಿಮ್ಮ ಅತ್ಯುತ್ತಮವಾಗಿದೆ.
★
61 : 12
يَغْفِرْ لَكُمْ ذُنُوبَكُمْ وَيُدْخِلْكُمْ جَنَّـٰتٍ تَجْرِى مِن تَحْتِهَا ٱلْأَنْهَـٰرُ وَمَسَـٰكِنَ طَيِّبَةً فِى جَنَّـٰتِ عَدْنٍ ۚ ذَٰلِكَ ٱلْفَوْزُ ٱلْعَظِيمُ
ಅಲ್ಲಾಹು ನಿಮ್ಮ ಪಾಪಗಳನ್ನು ಕ್ಷಮಿಸುವನು ಮತ್ತು ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿಗೆ ಮತ್ತು ಶಾಶ್ವತ ವಾಸದ ಸ್ವರ್ಗೋದ್ಯಾನಗಳಲ್ಲಿರುವ ಪರಿಶುದ್ಧ ವಸತಿಗಳಿಗೆ ನಿಮ್ಮನ್ನು ಪ್ರವೇಶ ಮಾಡಿಸುವನು. ಅದೇ ಅತಿದೊಡ್ಡ ವಿಜಯ.
★
61 : 13
وَأُخْرَىٰ تُحِبُّونَهَا ۖ نَصْرٌ مِّنَ ٱللَّهِ وَفَتْحٌ قَرِيبٌ ۗ وَبَشِّرِ ٱلْمُؤْمِنِينَ
ನೀವು ಇಷ್ಟಪಡುವ ಇನ್ನೊಂದು ಅನುಗ್ರಹವನ್ನು ಅವನು ನಿಮಗೆ ದಯಪಾಲಿಸುವನು. ಅದು ಅಲ್ಲಾಹನ ಸಹಾಯ ಮತ್ತು ಹತ್ತಿರದಲ್ಲೇ ಇರುವ ವಿಜಯವಾಗಿದೆ. ಸತ್ಯವಿಶ್ವಾಸಿಗಳಿಗೆ ಸುವಾರ್ತೆಯನ್ನು ತಿಳಿಸಿರಿ.
★
61 : 14
يَـٰٓأَيُّهَا ٱلَّذِينَ ءَامَنُوا۟ كُونُوٓا۟ أَنصَارَ ٱللَّهِ كَمَا قَالَ عِيسَى ٱبْنُ مَرْيَمَ لِلْحَوَارِيِّـۧنَ مَنْ أَنصَارِىٓ إِلَى ٱللَّهِ ۖ قَالَ ٱلْحَوَارِيُّونَ نَحْنُ أَنصَارُ ٱللَّهِ ۖ فَـَٔامَنَت طَّآئِفَةٌ مِّنۢ بَنِىٓ إِسْرَٰٓءِيلَ وَكَفَرَت طَّآئِفَةٌ ۖ فَأَيَّدْنَا ٱلَّذِينَ ءَامَنُوا۟ عَلَىٰ عَدُوِّهِمْ فَأَصْبَحُوا۟ ظَـٰهِرِينَ
ಓ ಸತ್ಯವಿಶ್ವಾಸಿಗಳೇ! ನೀವು ಅಲ್ಲಾಹನ ಸಹಾಯಕರಾಗಿರಿ. ಮರ್ಯಮರ ಮಗ ಈಸಾ ಹವಾರಿಗಳೊಡನೆ ಕೇಳಿದಂತೆ: “ಅಲ್ಲಾಹನ ಮಾರ್ಗದಲ್ಲಿ ನನಗೆ ಸಹಾಯಕರಾಗಿ ಯಾರಿದ್ದೀರಿ?” ಹವಾರಿಗಳು ಉತ್ತರಿಸಿದರು: “ನಾವು ಅಲ್ಲಾಹನ ಮಾರ್ಗದಲ್ಲಿ ಸಹಾಯ ಮಾಡುತ್ತೇವೆ.” ನಂತರ ಇಸ್ರಾಯೇಲ್ ಮಕ್ಕಳಲ್ಲಿ ಸೇರಿದ ಒಂದು ಗುಂಪು ವಿಶ್ವಾಸವಿಟ್ಟರೆ ಇನ್ನೊಂದು ಗುಂಪು ನಿಷೇಧಿಸಿತು. ಆಗ ನಾವು ಸತ್ಯವಿಶ್ವಾಸಿಗಳಿಗೆ ಅವರ ವೈರಿಗಳ ವಿರುದ್ಧ ಬೆಂಬಲವನ್ನು ನೀಡಿದೆವು. ತನ್ನಿಮಿತ್ತ ಅವರು ವಿಜಯಿಗಳಾದರು.
★