68 : 1
نٓ ۚ وَٱلْقَلَمِ وَمَا يَسْطُرُونَ
ನೂನ್. ಲೇಖನಿ ಮತ್ತು ಅವರು (ದೇವದೂತರುಗಳು) ಬರೆಯುವುದರ ಮೇಲಾಣೆ!
★
68 : 2
مَآ أَنتَ بِنِعْمَةِ رَبِّكَ بِمَجْنُونٍ
ನಿಮ್ಮ ಪರಿಪಾಲಕನ (ಅಲ್ಲಾಹನ) ಅನುಗ್ರಹದಿಂದಾಗಿ ನೀವು ಮಾನಸಿಕ ಅಸ್ವಸ್ಥರಲ್ಲ.
★
68 : 3
وَإِنَّ لَكَ لَأَجْرًا غَيْرَ مَمْنُونٍ
ನಿಶ್ಚಯವಾಗಿಯೂ ನಿಮಗೆ ಎಂದೂ ಮುಗಿಯದ ಪ್ರತಿಫಲವಿದೆ.
★
68 : 4
وَإِنَّكَ لَعَلَىٰ خُلُقٍ عَظِيمٍ
ನಿಶ್ಚಯವಾಗಿಯೂ ನೀವು ಶ್ರೇಷ್ಠ ಗುಣ ನಡವಳಿಕೆಯಲ್ಲಿದ್ದೀರಿ.
★
68 : 5
فَسَتُبْصِرُ وَيُبْصِرُونَ
ಆದ್ದರಿಂದ ನೀವು ನೋಡುವಿರಿ ಮತ್ತು ಅವರು ಕೂಡ ನೋಡುವರು.
★
68 : 6
بِأَييِّكُمُ ٱلْمَفْتُونُ
ನಿಮ್ಮಲ್ಲಿ ಕ್ಷೋಭೆಗೆ ಬಲಿಯಾದವರು ಯಾರೆಂದು.
★
68 : 7
إِنَّ رَبَّكَ هُوَ أَعْلَمُ بِمَن ضَلَّ عَن سَبِيلِهِۦ وَهُوَ أَعْلَمُ بِٱلْمُهْتَدِينَ
ನಿಶ್ಚಯವಾಗಿಯೂ ತನ್ನ ಮಾರ್ಗದಿಂದ ತಪ್ಪಿಹೋದವರ ಬಗ್ಗೆ ನಿಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ಬಹಳ ಚೆನ್ನಾಗಿ ತಿಳಿದಿದೆ. ಸನ್ಮಾರ್ಗ ಪಡೆದವರ ಬಗ್ಗೆಯೂ ಅವನಿಗೆ ಬಹಳ ಚೆನ್ನಾಗಿ ತಿಳಿದಿದೆ.
★
68 : 8
فَلَا تُطِعِ ٱلْمُكَذِّبِينَ
ಆದ್ದರಿಂದ ನೀವು ಸತ್ಯನಿಷೇಧಿಗಳ ಮಾತನ್ನು ಕೇಳಬೇಡಿ.
★
68 : 9
وَدُّوا۟ لَوْ تُدْهِنُ فَيُدْهِنُونَ
ನೀವು ಸ್ವಲ್ಪ ಮೃದುವಾದರೆ ಅವರು ಕೂಡ ಮೃದುವಾಗುತ್ತಾರೆ ಎಂದು ಅವರು ಬಯಸುತ್ತಾರೆ.[1]
★
68 : 10
وَلَا تُطِعْ كُلَّ حَلَّافٍ مَّهِينٍ
ನೀವು ಎಲ್ಲಾ ಪದೇ ಪದೇ ಆಣೆ ಮಾಡುವ ನೀಚರ ಮಾತನ್ನು ಕೇಳಬೇಡಿ.
★
68 : 11
هَمَّازٍ مَّشَّآءٍۭ بِنَمِيمٍ
(ಅಂದರೆ) ಚುಚ್ಚಿ ಮಾತನಾಡುವವನು ಮತ್ತು ಚಾಡಿಯೊಂದಿಗೆ ನಡೆಯುವವನು.
★
68 : 12
مَّنَّاعٍ لِّلْخَيْرِ مُعْتَدٍ أَثِيمٍ
ಒಳಿತಿಗೆ ಅಡ್ಡಿಪಡಿಸುವವನು, ಎಲ್ಲೆ ಮೀರಿದವನು ಮತ್ತು ಕಡುಪಾಪಿಯಾಗಿರುವವನು.
★
68 : 13
عُتُلٍّۭ بَعْدَ ذَٰلِكَ زَنِيمٍ
ಒರಟನು, ಮಾತ್ರವಲ್ಲದೆ ಕುಲಕ್ಕೆ ಸೇರದವನು.[1]
★
68 : 14
أَن كَانَ ذَا مَالٍ وَبَنِينَ
ಅವನಿಗೆ ಆಸ್ತಿ ಮತ್ತು ಗಂಡು ಮಕ್ಕಳಿರುವುದೇ ಅವನ (ಈ ದುರ್ನಡತೆಗೆ) ಕಾರಣವಾಗಿದೆ.
★
68 : 15
إِذَا تُتْلَىٰ عَلَيْهِ ءَايَـٰتُنَا قَالَ أَسَـٰطِيرُ ٱلْأَوَّلِينَ
ಅವನಿಗೆ ನಮ್ಮ ವಚನಗಳನ್ನು ಓದಿಕೊಡಲಾದರೆ, ಅದನ್ನು ಪ್ರಾಚೀನ ಕಾಲದವರ ಪುರಾಣಗಳು ಎಂದು ಹೇಳುತ್ತಾನೆ.
★
68 : 16
سَنَسِمُهُۥ عَلَى ٱلْخُرْطُومِ
ನಾವು ಅವನ ಮೂಗಿನ ಮೇಲೆ ಬರೆ ಹಾಕುವೆವು.
★
68 : 17
إِنَّا بَلَوْنَـٰهُمْ كَمَا بَلَوْنَآ أَصْحَـٰبَ ٱلْجَنَّةِ إِذْ أَقْسَمُوا۟ لَيَصْرِمُنَّهَا مُصْبِحِينَ
ನಿಶ್ಚಯವಾಗಿಯೂ ಆ ತೋಟದ ಜನರನ್ನು ಪರೀಕ್ಷಿಸಿದಂತೆ ನಾವು ಅವರನ್ನೂ ಪರೀಕ್ಷಿಸಿದೆವು. ಬೆಳಗಾಗುತ್ತಿದ್ದಂತೆ ತೋಟದ ಹಣ್ಣುಗಳನ್ನು ನಾವು ಖಂಡಿತ ಕೊಯ್ಯುವೆವು ಎಂದು ಅವರು ಆಣೆ ಮಾಡಿ ಹೇಳಿದ ಸಂದರ್ಭ.
★
68 : 18
وَلَا يَسْتَثْنُونَ
ಆದರೆ ಅವರು ಇನ್‌ಶಾ ಅಲ್ಲಾಹ್ (ಅಲ್ಲಾಹು ಇಚ್ಛಿಸಿದರೆ) ಎಂದು ಹೇಳಲಿಲ್ಲ.
★
68 : 19
فَطَافَ عَلَيْهَا طَآئِفٌ مِّن رَّبِّكَ وَهُمْ نَآئِمُونَ
ಆದ್ದರಿಂದ, ಅವರು ನಿದ್ದೆಯಲ್ಲಿದ್ದಾಗಲೇ (ರಾತ್ರೋರಾತ್ರಿ) ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಒಂದು ಶಿಕ್ಷೆಯು ಆ ತೋಟವನ್ನು ನಾಲ್ಕೂ ಕಡೆಯಿಂದ ಸುತ್ತಿತು.
★
68 : 20
فَأَصْبَحَتْ كَٱلصَّرِيمِ
ಆಗ ಆ ತೋಟವು ಕಟಾವು ಮಾಡಿದ ಹೊಲದಂತಾಯಿತು.
★
68 : 21
فَتَنَادَوْا۟ مُصْبِحِينَ
ಬೆಳಗಾಗುತ್ತಿದ್ದಂತೆ ಅವರು ಒಬ್ಬರನ್ನೊಬ್ಬರು ಕೂಗಿ ಕರೆದು ಹೇಳಿದರು:
★
68 : 22
أَنِ ٱغْدُوا۟ عَلَىٰ حَرْثِكُمْ إِن كُنتُمْ صَـٰرِمِينَ
“ನಿಮಗೆ ಹಣ್ಣು ಕೊಯ್ಯಬೇಕೆಂದಿದ್ದರೆ ಬೆಳಿಗ್ಗೆಯೇ ನಿಮ್ಮ ತೋಟಕ್ಕೆ ಹೊರಡಿ.”
★
68 : 23
فَٱنطَلَقُوا۟ وَهُمْ يَتَخَـٰفَتُونَ
ನಂತರ ಅವರು ಪರಸ್ಪರ ಗುಟ್ಟಾಗಿ ಈ ಮಾತುಗಳನ್ನು ಹೇಳುತ್ತಾ ಹೊರಟರು:
★
68 : 24
أَن لَّا يَدْخُلَنَّهَا ٱلْيَوْمَ عَلَيْكُم مِّسْكِينٌ
“ಇಂದು ನಿಮ್ಮ ಬಳಿಗೆ ಯಾವುದೇ ಬಡವ ಬರುವಂತಾಗಬಾರದು.”
★
68 : 25
وَغَدَوْا۟ عَلَىٰ حَرْدٍ قَـٰدِرِينَ
ಅವರು ಒಂದು ನಿರ್ಧಾರದೊಂದಿಗೆ (ಅದನ್ನು ಜಾರಿಗೊಳಿಸುವ) ಪೂರ್ಣ ಸಾಮರ್ಥ್ಯವಿದೆಯೆಂದು ಪರಿಗಣಿಸಿ ಬೆಳಗ್ಗೆಯೇ ಹೊರಟರು.
★
68 : 26
فَلَمَّا رَأَوْهَا قَالُوٓا۟ إِنَّا لَضَآلُّونَ
ಆದರೆ ಅವರು ಆ ತೋಟವನ್ನು ನೋಡಿದಾಗ ಅವರು ಹೇಳಿದರು: “ನಿಶ್ಚಯವಾಗಿಯೂ ನಮಗೆ ದಾರಿ ತಪ್ಪಿದೆ.
★
68 : 27
بَلْ نَحْنُ مَحْرُومُونَ
ಅಲ್ಲ, ನಮಗೆ ಅದೃಷ್ಟ ಕೈಕೊಟ್ಟಿದೆ.”
★
68 : 28
قَالَ أَوْسَطُهُمْ أَلَمْ أَقُل لَّكُمْ لَوْلَا تُسَبِّحُونَ
ಅವರಲ್ಲಿದ್ದ ಉತ್ತಮ ವ್ಯಕ್ತಿ ಹೇಳಿದನು: “ನೀವೇಕೆ ಅಲ್ಲಾಹನ ಪರಿಶುದ್ಧಿಯನ್ನು ಕೊಂಡಾಡುವುದಿಲ್ಲ ಎಂದು ನಾನು ನಿಮ್ಮೊಡನೆ ಕೇಳಲಿಲ್ಲವೇ?”
★
68 : 29
قَالُوا۟ سُبْحَـٰنَ رَبِّنَآ إِنَّا كُنَّا ظَـٰلِمِينَ
ಅವರು ಹೇಳಿದರು: “ನಮ್ಮ ಪರಿಪಾಲಕನ (ಅಲ್ಲಾಹನ) ಪರಿಶುದ್ಧಿಯನ್ನು ನಾವು ಕೊಂಡಾಡುತ್ತೇವೆ. ನಿಶ್ಚಯವಾಗಿಯೂ ನಾವು ಅಕ್ರಮಿಗಳಾಗಿದ್ದೇವೆ.”
★
68 : 30
فَأَقْبَلَ بَعْضُهُمْ عَلَىٰ بَعْضٍ يَتَلَـٰوَمُونَ
ನಂತರ ಅವರು ಒಬ್ಬರಿಗೊಬ್ಬರು ಮುಖ ಮಾಡಿ ಪರಸ್ಪರ ಆರೋಪ ಹೊರಿಸತೊಡಗಿದರು.
★
68 : 31
قَالُوا۟ يَـٰوَيْلَنَآ إِنَّا كُنَّا طَـٰغِينَ
ಅವರು ಹೇಳಿದರು: “ಓ ನಮ್ಮ ದುರ್ಗತಿಯೇ! ನಿಶ್ಚಯವಾಗಿಯೂ ನಾವು ಅತಿರೇಕಿಗಳಾಗಿದ್ದೆವು.
★
68 : 32
عَسَىٰ رَبُّنَآ أَن يُبْدِلَنَا خَيْرًا مِّنْهَآ إِنَّآ إِلَىٰ رَبِّنَا رَٰغِبُونَ
ನಮ್ಮ ಪರಿಪಾಲಕನು (ಅಲ್ಲಾಹು) ನಮಗೆ ಇದಕ್ಕಿಂತಲೂ ಉತ್ತಮವಾದುದನ್ನು ಬದಲಿಯಾಗಿ ನೀಡಬಹುದು. ನಿಶ್ಚಯವಾಗಿಯೂ ನಾವು ನಮ್ಮ ಪರಿಪಾಲಕನ (ಅಲ್ಲಾಹನ) ಬಗ್ಗೆ ಆಶಾವಾದಿಗಳಾಗಿದ್ದೇವೆ.”
★
68 : 33
كَذَٰلِكَ ٱلْعَذَابُ ۖ وَلَعَذَابُ ٱلْـَٔاخِرَةِ أَكْبَرُ ۚ لَوْ كَانُوا۟ يَعْلَمُونَ
ಶಿಕ್ಷೆಯು ಹೀಗೆಯೇ ಆಗಿದೆ. ಪರಲೋಕದ ಶಿಕ್ಷೆಯು ಅತಿದೊಡ್ಡದಾಗಿದೆ. ಅವರು ಅದನ್ನು ತಿಳಿಯುತ್ತಿದ್ದರೆ!
★
68 : 34
إِنَّ لِلْمُتَّقِينَ عِندَ رَبِّهِمْ جَنَّـٰتِ ٱلنَّعِيمِ
ನಿಶ್ಚಯವಾಗಿಯೂ, ದೇವಭಯವುಳ್ಳವರಿಗೆ ಅವರ ಪರಿಪಾಲಕನ (ಅಲ್ಲಾಹನ) ಬಳಿ ಸುಖಾಡಂಬರಗಳಿಂದ ಕೂಡಿದ ಸ್ವರ್ಗೋದ್ಯಾನಗಳಿವೆ.
★
68 : 35
أَفَنَجْعَلُ ٱلْمُسْلِمِينَ كَٱلْمُجْرِمِينَ
ಹಾಗಾದರೆ ನಾವು ಮುಸ್ಲಿಮರನ್ನು ಅಪರಾಧಿಗಳಂತೆ ನಡೆಸಿಕೊಳ್ಳುವೆವೇ?
★
68 : 36
مَا لَكُمْ كَيْفَ تَحْكُمُونَ
ನಿಮಗೇನಾಗಿದೆ? ನೀವು ಹೇಗೆ ತೀರ್ಪು ನೀಡುತ್ತೀರಿ?
★
68 : 37
أَمْ لَكُمْ كِتَـٰبٌ فِيهِ تَدْرُسُونَ
ನಿಮ್ಮಲ್ಲಿ ಒಂದು ಗ್ರಂಥವಿದ್ದು ನೀವು ಅದರಿಂದ ಓದುತ್ತಿದ್ದೀರಾ?
★
68 : 38
إِنَّ لَكُمْ فِيهِ لَمَا تَخَيَّرُونَ
ಅದರಲ್ಲಿ ನಿಮ್ಮ ಮನಸ್ಸಿಗೆ ಒಪ್ಪಿಗೆಯಾಗುವ ವಿಷಯಗಳಿವೆಯೇ?
★
68 : 39
أَمْ لَكُمْ أَيْمَـٰنٌ عَلَيْنَا بَـٰلِغَةٌ إِلَىٰ يَوْمِ ٱلْقِيَـٰمَةِ ۙ إِنَّ لَكُمْ لَمَا تَحْكُمُونَ
ಅಥವಾ, ನೀವು ಸ್ವಯಂ ನಿಶ್ಚಯಿಸುವುದೆಲ್ಲವೂ ನಿಮಗಿದೆಯೆಂದು ಪುನರುತ್ಥಾನ ದಿನದ ತನಕ ತಲುಪುವ ಯಾವುದಾದರೂ ಪ್ರತಿಜ್ಞೆಗಳನ್ನು ನೀವು ನಮ್ಮಿಂದ ಪಡೆದಿದ್ದೀರಾ?
★
68 : 40
سَلْهُمْ أَيُّهُم بِذَٰلِكَ زَعِيمٌ
ಅವರಲ್ಲಿ ಯಾರು ಇದರ ಹೊಣೆಯನ್ನು ವಹಿಸಿಕೊಳ್ಳುತ್ತಾರೆಂದು ಅವರೊಡನೆ ಕೇಳಿರಿ.
★
68 : 41
أَمْ لَهُمْ شُرَكَآءُ فَلْيَأْتُوا۟ بِشُرَكَآئِهِمْ إِن كَانُوا۟ صَـٰدِقِينَ
ಅವರಿಗೆ ಯಾರಾದರೂ ಸಹಭಾಗಿಗಳು ಇದ್ದಾರೆಯೇ? ಅವರು ಸತ್ಯವಂತರಾಗಿದ್ದರೆ ಅವರ ಸಹಭಾಗಿಗಳನ್ನು ಕರೆದುಕೊಂಡು ಬರಲಿ.
★
68 : 42
يَوْمَ يُكْشَفُ عَن سَاقٍ وَيُدْعَوْنَ إِلَى ٱلسُّجُودِ فَلَا يَسْتَطِيعُونَ
ಕಣಕಾಲನ್ನು ಪ್ರದರ್ಶಿಸಲಾಗುವ ದಿನ. ಆಗ ಅವರನ್ನು ಸಾಷ್ಟಾಂಗ ಮಾಡಲು ಕರೆಯಲಾಗುವುದು. ಆದರೆ ಅವರಿಗೆ (ಸಾಷ್ಟಾಂಗ ಮಾಡಲು) ಸಾಧ್ಯವಾಗುವುದಿಲ್ಲ.[1]
★
68 : 43
خَـٰشِعَةً أَبْصَـٰرُهُمْ تَرْهَقُهُمْ ذِلَّةٌ ۖ وَقَدْ كَانُوا۟ يُدْعَوْنَ إِلَى ٱلسُّجُودِ وَهُمْ سَـٰلِمُونَ
ಅವರ ಕಣ್ಣುಗಳು ತಗ್ಗಿಕೊಂಡಿರುವುವು ಮತ್ತು ಅವಮಾನವು ಅವರನ್ನು ಆವರಿಸಿಕೊಂಡಿರುವುದು. ವಾಸ್ತವದಲ್ಲಿ ಅವರು ಇಹಲೋಕದಲ್ಲಿ ಸುಸ್ಥಿತಿಯಲ್ಲಿದ್ದಾಗಲೂ ಅವರನ್ನು ಸಾಷ್ಟಾಂಗ ಮಾಡಲು ಕರೆಯಲಾಗುತ್ತಿತ್ತು.
★
68 : 44
فَذَرْنِى وَمَن يُكَذِّبُ بِهَـٰذَا ٱلْحَدِيثِ ۖ سَنَسْتَدْرِجُهُم مِّنْ حَيْثُ لَا يَعْلَمُونَ
ಆದ್ದರಿಂದ ನನ್ನನ್ನು ಮತ್ತು ಈ ಮಾತನ್ನು (ಕುರ್‌ಆನನ್ನು) ನಿಷೇಧಿಸುವವನನ್ನು ಬಿಟ್ಟುಬಿಡಿ.[1] ಅವರು ತಿಳಿಯದ ರೀತಿಯಲ್ಲಿ ನಾವು ಅವರನ್ನು ಹಂತ ಹಂತವಾಗಿ ಹಿಡಿಯುವೆವು.
★
68 : 45
وَأُمْلِى لَهُمْ ۚ إِنَّ كَيْدِى مَتِينٌ
ನಾನು ಅವರಿಗೆ ಕಾಲಾವಕಾಶ ನೀಡುವೆನು. ನಿಶ್ಚಯವಾಗಿಯೂ ನನ್ನ ತಂತ್ರವು ಬಲಿಷ್ಠವಾಗಿದೆ.
★
68 : 46
أَمْ تَسْـَٔلُهُمْ أَجْرًا فَهُم مِّن مَّغْرَمٍ مُّثْقَلُونَ
ನೀವು ಅವರೊಡನೆ ಪ್ರತಿಫಲವನ್ನು ಕೇಳಿ ಅವರು (ಅದನ್ನು ನೀಡಲು ಸಾಧ್ಯವಾಗದೆ) ಸಾಲದ ಹೊರೆಯನ್ನು ಹೊರುತ್ತಿದ್ದಾರೆಯೇ?
★
68 : 47
أَمْ عِندَهُمُ ٱلْغَيْبُ فَهُمْ يَكْتُبُونَ
ಅವರ ಬಳಿ ಅದೃಶ್ಯ ಜ್ಞಾನವಿದ್ದು ಅವರು ಅದನ್ನು ಬರೆಯುತ್ತಿದ್ದಾರೆಯೇ?
★
68 : 48
فَٱصْبِرْ لِحُكْمِ رَبِّكَ وَلَا تَكُن كَصَاحِبِ ٱلْحُوتِ إِذْ نَادَىٰ وَهُوَ مَكْظُومٌ
ಆದ್ದರಿಂದ, ನಿಮ್ಮ ಪರಿಪಾಲಕನ (ಅಲ್ಲಾಹನ) ತೀರ್ಮಾನಕ್ಕಾಗಿ ತಾಳ್ಮೆಯಿಂದಿರಿ. ನೀವು ಮೀನಿನ ಸಂಗಡಿಗನಂತೆ (ಯೂನುಸರಂತೆ) ಆಗಬೇಡಿ. ತೀವ್ರ ದುಃಖಿತನಾಗಿದ್ದ ಸ್ಥಿತಿಯಲ್ಲಿ ಅವರು ಕರೆದು ಪ್ರಾರ್ಥಿಸಿದ ಸಂದರ್ಭ.
★
68 : 49
لَّوْلَآ أَن تَدَٰرَكَهُۥ نِعْمَةٌ مِّن رَّبِّهِۦ لَنُبِذَ بِٱلْعَرَآءِ وَهُوَ مَذْمُومٌ
ಅವರ ಪರಿಪಾಲಕನ (ಅಲ್ಲಾಹನ) ಅನುಗ್ರಹವು ಅವರನ್ನು ತಲುಪದಿರುತ್ತಿದ್ದರೆ, ಅವರನ್ನು ಆಕ್ಷೇಪಿತ ಸ್ಥಿತಿಯಲ್ಲಿ ಬಯಲು ತೀರಕ್ಕೆ ಎಸೆಯಲಾಗುತ್ತಿತ್ತು.
★
68 : 50
فَٱجْتَبَـٰهُ رَبُّهُۥ فَجَعَلَهُۥ مِنَ ٱلصَّـٰلِحِينَ
ಅವರ ಪರಿಪಾಲಕ (ಅಲ್ಲಾಹು) ಅವರನ್ನು ಆರಿಸಿದನು ಮತ್ತು ಅವರನ್ನು ನೀತಿವಂತರಲ್ಲಿ ಸೇರಿಸಿದನು.
★
68 : 51
وَإِن يَكَادُ ٱلَّذِينَ كَفَرُوا۟ لَيُزْلِقُونَكَ بِأَبْصَـٰرِهِمْ لَمَّا سَمِعُوا۟ ٱلذِّكْرَ وَيَقُولُونَ إِنَّهُۥ لَمَجْنُونٌ
ಸತ್ಯನಿಷೇಧಿಗಳು ಈ ಉಪದೇಶವನ್ನು (ಕುರ್‌ಆನನ್ನು) ಕೇಳಿದಾಗ, ತಮ್ಮ ಕೆಟ್ಟದೃಷ್ಟಿಗಳಿಂದ ನಿಮ್ಮನ್ನು ಇನ್ನೇನು ಜಾರುವಂತೆ ಮಾಡುವುದರಲ್ಲಿದ್ದರು.[1] ಅವರು ಹೇಳುತ್ತಿದ್ದರು: “ನಿಶ್ಚಯವಾಗಿಯೂ ಅವನೊಬ್ಬ ಮಾನಸಿಕ ಅಸ್ವಸ್ಥ.”
★
68 : 52
وَمَا هُوَ إِلَّا ذِكْرٌ لِّلْعَـٰلَمِينَ
ಇದು (ಕುರ್‌ಆನ್) ಸರ್ವಲೋಕಗಳ ಜನರಿಗೆ ಒಂದು ಉಪದೇಶವಲ್ಲದೆ ಇನ್ನೇನೂ ಅಲ್ಲ.
★